ಗಣೇಶ ಹಬ್ಬದಂದೇ ಮಗನ ಹೆಸರನ್ನು ರಿವೀಲ್ ಮಾಡಿದ ಡಾಲಿ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದ್ದು, ಗಣೇಶ ಚತುರ್ಥಿಯಂದೇ ಮಗನ ಹೆಸರನ್ನು ರಿವೀಲ್ ಮಾಡಿದ್ದಾರೆ.

ತಮ್ಮ ಮಗನಿಗೆ ‘ಎರೆಯ’ ಎಂದು ನಾಮಕರಣ ಮಾಡಿರುವುದಾಗಿ ಡಾಲಿ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ನಕ್ಷೆಯ ಮಧ್ಯೆ ಮಗನ ಹೆಸರು ಇರುವ ಡಾಲರ್‌ನ್ನು ಮಾಡಿಸಿ, ಅದರ ಮೂಲಕ ಮಗನ ಹೆಸರನ್ನು ಡಾಲಿ ದಂಪತಿ ಪರಿಚಯಿಸಿದ್ದಾರೆ.

‘ಎರೆಯ’ ಎಂದರೆ ಒಡೆಯ, ಅಧಿಪತಿ ಎಂಬ ಅರ್ಥವಿದೆ. ಇತಿಹಾಸದಲ್ಲೂ ಇಮ್ಮಡಿ ಪುಲಕೇಶಿಯ ಬಾಲ್ಯದ ಹೆಸರು ‘ಎರೆಯ’ ಎಂದಾಗಿತ್ತು ಎನ್ನಲಾಗುತ್ತದೆ. ಈ ಹಿನ್ನೆಲೆ ಪಾರಂಪರಿಕ ಹಾಗೂ ಶಕ್ತಿಯುತ ಅರ್ಥವನ್ನು ಹೊಂದಿರುವ ಹೆಸರನ್ನು ಮಗನಿಗೆ ಇಡಲಾಗಿದೆ.

“ರಾಜರ, ಪಾರಂಪರಿಕ ಮತ್ತು ಶಕ್ತಿಯುತ ಅರ್ಥವನ್ನು ಹೊತ್ತಿರುವ ನಮ್ಮ ಪುಟ್ಟ ಬದುಕಿನ ಅಧಿಪತಿ, ನಮ್ಮ ಹೃದಯದ ರಾಜ ನಮ್ಮ ಎರೆಯ” ಎಂದು ಡಾಲಿ ದಂಪತಿ ಮಗನ ಹೆಸರನ್ನು ಪರಿಚಯಿಸಿದ್ದಾರೆ.

ಕಳೆದ ವರ್ಷ ಮೈಸೂರಿನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಧನಂಜಯ್ ಹಾಗೂ ಧನ್ಯತಾ ಸ್ಯಾಂಡಲ್‌ವುಡ್‌ನ ಗಮನ ಸೆಳೆದ ಜೋಡಿಗಳಲ್ಲಿ ಒಬ್ಬರು. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದ ಈ ಜೋಡಿ, ‘ನಮ್ಮ ಪ್ರಪಂಚ ವಿಸ್ತರಿಸುತ್ತಿದೆ’ ಎಂದು ಪೋಷಕರಾಗುತ್ತಿರುವ ಖುಷಿಯನ್ನು ಹಂಚಿಕೊಂಡಿದ್ದರು.

support our advertisers
Scroll to Top