ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ನಟ ಅಶೋಕ್, ಜಿಮ್ ರವಿ ಆಯ್ಕೆ; ಸಿನಿಮಾ ಮತ್ತು ಕಿರುತೆರೆಯ ಮೂವರಿಗೆ ಗೌರವ
2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹಿರಿಯ ನಟ ಅಶೋಕ್ ಹಾಗೂ ಕ್ರೀಡಾಪಟು ಜಿಮ್ ರವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 71 ಮಂದಿಯನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಅಕ್ಟೋಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ.ಸಿನಿಮಾ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಮೂವರಿಗೆ ಈ ಬಾರಿ ಪ್ರಶಸ್ತಿ ಲಭಿಸಿದೆ. ಧಾರವಾಡದ ಬಾಬಜೀ ವೆಂಕಟರಮಣ, ಬೆಂಗಳೂರು ಗ್ರಾಮಾಂತರದ ನಟ ಅಶೋಕ್ ಅವರು ಚಲನಚಿತ್ರ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಬೆಂಗಳೂರು ನಗರದ

