ಗಣೇಶ ಹಬ್ಬದಂದೇ ಮಗನ ಹೆಸರನ್ನು ರಿವೀಲ್ ಮಾಡಿದ ಡಾಲಿ
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದ್ದು, ಗಣೇಶ ಚತುರ್ಥಿಯಂದೇ ಮಗನ ಹೆಸರನ್ನು ರಿವೀಲ್ ಮಾಡಿದ್ದಾರೆ. ತಮ್ಮ ಮಗನಿಗೆ ‘ಎರೆಯ’ ಎಂದು ನಾಮಕರಣ ಮಾಡಿರುವುದಾಗಿ ಡಾಲಿ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕರ್ನಾಟಕದ ನಕ್ಷೆಯ ಮಧ್ಯೆ ಮಗನ ಹೆಸರು ಇರುವ ಡಾಲರ್ನ್ನು ಮಾಡಿಸಿ, ಅದರ ಮೂಲಕ ಮಗನ ಹೆಸರನ್ನು ಡಾಲಿ ದಂಪತಿ ಪರಿಚಯಿಸಿದ್ದಾರೆ. ‘ಎರೆಯ’ ಎಂದರೆ ಒಡೆಯ, ಅಧಿಪತಿ ಎಂಬ ಅರ್ಥವಿದೆ. ಇತಿಹಾಸದಲ್ಲೂ ಇಮ್ಮಡಿ ಪುಲಕೇಶಿಯ ಬಾಲ್ಯದ ಹೆಸರು ‘ಎರೆಯ’ ಎಂದಾಗಿತ್ತು
ಗಣೇಶ ಹಬ್ಬದಂದೇ ಮಗನ ಹೆಸರನ್ನು ರಿವೀಲ್ ಮಾಡಿದ ಡಾಲಿ Read More »

