- ರಾಘವೇಂದ್ರ ಅಡಿಗ ಎಚ್ಚೆನ್.
ಕೆಜಿಎಫ್ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಬಿಡುಗಡೆಯ ದಿನಾಂಕ ಮತ್ತೊಮ್ಮೆ ಮುಂದೂಡಲಾಗಿದೆ.

ಈ ಮೊದಲು ಜೂನ್ 4ರಂದು ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಸಿನೆಮಾಕಾನ್ ನಲ್ಲಿ ಚಿತ್ರಕ್ಕೆ ಸಿಕ್ಕ ಭರ್ಜರಿ ಜಾಗತಿಕ ಪ್ರತಿಕ್ರಿಯೆ ಹಿನ್ನೆಲೆ, ಇನ್ನಷ್ಟು ದೊಡ್ಡ ಮಟ್ಟದಲ್ಲಿ ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲಾಗಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ ಯಶ್, “ಟಾಕ್ಸಿಕ್ ಕೇವಲ ಒಂದು ಸಿನಿಮಾ ಅಲ್ಲ, ಇದು ನಮ್ಮ ಚಿತ್ರರಂಗದ ಮೇಲಿನ ಪ್ರೀತಿ ನೆನಪಿಸುವ ಪಯಣ” ಎಂದು ಹೇಳಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿತ್ರದ ಸಂಪೂರ್ಣ ಸಾಮರ್ಥ್ಯ ತಲುಪುವಂತೆ ಯೋಜನೆ ರೂಪಿಸುತ್ತಿರುವುದಾಗಿ ತಿಳಿಸಿದ್ದಾರೆ.

ಭಾರತೀಯ ಚಿತ್ರರಂಗವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದ ಯಶ್, ಉತ್ತಮ ಗುಣಮಟ್ಟದ ಸಿನಿಮಾ ನೀಡಲು ಸಮಯ ತೆಗೆದುಕೊಳ್ಳುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಚಿತ್ರತಂಡ ತಿಳಿಸಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

